ಶುಕ್ರವಾರ, ಜೂನ್ 25, 2021
23 °C

ಅರೆ ಬರೆ ಪ್ಯಾಕೇಜ್ ಜೀವನ ಉಳಿಸದು: ಸಿಪಿಐ(ಎಂ)

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಕಟಿಸಿರುವ ಕೋವಿಡ್ ಪರಿಹಾರವು ಅರೆ ಬರೆ ಪ್ಯಾಕೇಜ್ ಆಗಿದೆ. ಈ ಪ್ಯಾಕೇಜ್‌ ಜನತೆಯ ಜೀವನ ಉಳಿಸದು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಟೀಸಿದೆ.

’ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ ₹10 ಸಾವಿರ ಪರಿಹಾರವನ್ನು ಕನಿಷ್ಠ 6 ತಿಂಗಳು ನೀಡಬೇಕು ಮತ್ತು ಪ್ರತಿಯೊಂದು ಕುಟುಂಬಕ್ಕೂ ತಲಾ 10 ಕೆಜಿ ಉಚಿತ ಪಡಿತರ ನೀಡಬೇಕು. ಉದ್ಯೋಗ ಖಾತ್ರಿ ಕೆಲಸವನ್ನು ದಿನಕ್ಕೆ ₹600 ಕೂಲಿಯೊಂದಿಗೆ 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕು‌‌’ ಎಂದು ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎನ್. ಉಮೇಶ್‌ ಒತ್ತಾಯಿಸಿದ್ದಾರೆ.

ನಾಳೆ ಪ್ರತಿಭಟನೆ:

‘ರಾಜ್ಯದ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ ₹10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯದಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದರೂ‌ ಇದೀಗ ಸರ್ಕಾರ ಕೇವಲ ‌₹3000 ಪರಿಹಾರ ಘೋಷಿಸಿದೆ. ಇದನ್ನು ಮಾರ್ಪಡಿಸಿ, ಕೂಡಲೇ 10 ಸಾವಿರ ಘೋಷಿಸಬೇಕು ಎಂದು ಒತ್ತಾಯಿಸಿ, ಇದೇ 21ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು‘ ಎಂದು  ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ಕೆ. ಮಹಾಂತೇಶ್‌ ತಿಳಿಸಿದ್ದಾರೆ.

‘ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು