ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಬಿಎಂಪಿ ಆಡಳಿತದಲ್ಲಿ ನಿರ್ವಾತ ಸೃಷ್ಟಿಸಿದ ಸರ್ಕಾರ’

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಆರೋಪ
Last Updated 17 ಮಾರ್ಚ್ 2021, 19:25 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಗೆ ನೇಮಿಸಲಾಗಿದ್ದ ಆಡಳಿತಾಧಿಕಾರಿಯ ಅವಧಿಯನ್ನೂ ವಿಸ್ತರಿಸದ ಬಿಜೆಪಿ ನೇತೃತ್ವದ ಸರ್ಕಾರವು ಪಾಲಿಕೆಯ ಆಡಳಿತದಲ್ಲಿ ನಿರ್ವಾತ ಸೃಷ್ಟಿಸಿದೆ’ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿ ಆರೋಪಿಸಿದೆ.

‘ಬಿಬಿಎಂಪಿಯ ಚುನಾಯಿತ ಕಾಲಾವಧಿ 2020ರ ಸೆ.1ರಂದು ಕೊನೆಯಾಗಿದೆ. ಅದಕ್ಕೂ ಮೊದಲು ಚುನಾವಣೆ ನಡೆಸಿ, ಚುನಾಯಿತ ಕೌನ್ಸಿಲ್ ರಚಿಸಲು ಅವಕಾಶ ನೀಡಬೇಕಿತ್ತು. ಆದರೆ, ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಾಗಿ ಚುನಾವಣೆ ನಡೆಸದೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿತ್ತು. 2021ರ ಮಾ.10ಕ್ಕೆ ಆಡಳಿತಾಧಿಕಾರಿಯ ಅವಧಿ ಮುಕ್ತಾಯಗೊಂಡಿದೆ. ಈಗ ಚುನಾವಣೆಯನ್ನೂ ನಡೆಸದೆ, ಆಡಳಿತಾಧಿಕಾರಿಯ ಅವಧಿಯನ್ನೂ ವಿಸ್ತರಿಸದೆ ಬಿಬಿಎಂಪಿ ಆಡಳಿತವನ್ನು ಅತಂತ್ರಗೊಳಿಸಿದೆ. ಇದಕ್ಕೆ ಸರ್ಕಾರದ ದುರಾಡಳಿತವೇ ಕಾರಣ’ ಎಂದು ಸಮಿತಿ ಕಾರ್ಯದರ್ಶಿ ಕೆ.ಎನ್. ಉಮೇಶ್ ಮತ್ತು ಎನ್. ಪ್ರತಾಪ್ ಸಿಂಹ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT