ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾರಲರ ನಡೆ ಖಂಡಿಸಿ ಸಿಪಿಐ ಕಾರ್ಯಕರ್ತರ ಪ್ರತಿಭಟನೆ

Published : 29 ಆಗಸ್ಟ್ 2024, 15:41 IST
Last Updated : 29 ಆಗಸ್ಟ್ 2024, 15:41 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕೆಆರ್‌ಡಿಎಸ್‌ಎಸ್‌) ಸದಸ್ಯರು ಹಾಗೂ ಭಾರತ ಕಮ್ಯುನಿಸ್ಟ್‌ ಪಕ್ಷದ (ಸಿಪಿಐ) ಕಾರ್ಯಕರ್ತರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಕೆಆರ್‌ಡಿಎಸ್‌ಎಸ್‌ನ ಜಿಲ್ಲಾ ಸಂಚಾಲಕ ಕ್ಯಾಲಸನಹಳ್ಳಿ ಶ್ರೀನಿವಾಸ ಮಾತನಾಡಿ, ‘ರಾಜ್ಯಪಾಲರು ಸಾಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರು ದೇಶದ ರಾಷ್ಟ್ರಪತಿಗಳ ಪ್ರತಿನಿಧಿಯಾಗಿದ್ದು, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಆದರೆ, ಬಿಜೆಪಿ ಪ್ರತಿನಿಧಿಯಂತೆ ಕೆಲಸ ಮಾಡುತ್ತಿರುವುದು ಖಂಡನೀಯ’ ಎಂದು ಹೇಳಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಂ. ಸತ್ಯಾನಂದ ಮಾತನಾಡಿ, ‘ಜನತಂತ್ರ ವ್ಯವಸ್ಥೆಯಲ್ಲಿ ಬಹುಮತದಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿರುವ ಬಿಜೆಪಿಯ ಕುಟೀಲ ನೀತಿ ಬಹಿರಂಗವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಇದು ರಾಜಕೀಯ ಪ್ರೇರಿತ ತೀರ್ಮಾನ’ ಎಂದು ದೂರಿದರು.

‘ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ, ಒಕ್ಕೂಟ ವ್ಯವಸ್ಥೆ ಉಳಿಸಿ’ ಎಂಬ ಘೋಷಣೆಗಳನ್ನು ಪ್ರತಿಭಟನಕಾರರು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT