‘ಆರೋಗ್ಯ ಸಚಿವ ಆರ್.ದಿನೇಶ್ ಗುಂಡೂರಾವ್, ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಸಹ ತರಬೇತಿಯಲ್ಲಿ ಭಾಗವಹಿಸಿದ್ದರು. ಒಂದೇ ಸ್ಥಳದಲ್ಲಿ ಅತೀ ಹೆಚ್ಚು ಮಂದಿಗೆ ತರಬೇತಿ ನೀಡಿರುವುದು ಇದೇ ಮೊದಲು. ಪ್ರಥಮ ಚಿಕಿತ್ಸೆ ತರಬೇತಿ ಪಡೆದಿದ್ದರೆ, ತುರ್ತು ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ಸಾಧ್ಯ. ನಿತ್ಯ ವಿವಿಧ ಘಟನೆಗಳನ್ನು ಪೊಲೀಸರು ನೋಡುತ್ತಾರೆ. ಸಿಆರ್‌ಪಿ ವಿಧಾನ ಹಾಗೂ ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರುವುದು ಅಗತ್ಯ. ಹಠಾತ್ ಹೃದಯಾಘಾತ ಸಂದರ್ಭದಲ್ಲಿ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡಲು ಸಿಪಿಆರ್ ವಿಧಾನ ಸಹಾಯಕ. ಕೋವಿಡ್ ಬಳಿಕ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ’ ಎಂದು ಹೇಳಿದರು.