ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲಾ ಮಟ್ಟದಲ್ಲೇ ಪ್ರಶ್ನೆಪತ್ರಿಕೆ ರಚಿಸಿ: ಸರ್ಕಾರಕ್ಕೆ ಎಐಡಿಎಸ್ಒ ಆಗ್ರಹ

Published : 6 ಸೆಪ್ಟೆಂಬರ್ 2024, 4:34 IST
Last Updated : 6 ಸೆಪ್ಟೆಂಬರ್ 2024, 4:34 IST
ಫಾಲೋ ಮಾಡಿ
Comments

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗೆ ಶಾಲಾ ಮಟ್ಟದಲ್ಲೇ ಪ್ರಶ್ನೆಪತ್ರಿಕೆಗಳನ್ನು ರಚಿಸಬೇಕು’ ಎಂದು ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ರಾಜ್ಯ ಸಮಿತಿ ಸರ್ಕಾರಕ್ಕೆ ಆಗ್ರಹಿಸಿದೆ. 

‘ಈ ಸಾಲಿನ ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗೆ ಕೆಲವೇ ದಿನ ಇರುವಾಗ ಪ್ರಶ್ನೆಪತ್ರಿಕೆಗಳನ್ನು ರೂಪಿಸಿ, ವಿತರಿಸುವ ನಿರ್ಧಾರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೈಗೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಗಳನ್ನು ತರಬೇಕಾದರೆ ಅದನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಾಡಬೇಕು. ಅರ್ಧ ವಾರ್ಷಿಕ ಪರೀಕ್ಷೆಗೆ ಯಾರು ಪ್ರಶ್ನೆಪತ್ರಿಕೆ ತಯಾರಿಸಬೇಕು? ಎಂದು ಶೈಕ್ಷಣಿಕ ವರ್ಷದ ಆರಂಭದಲ್ಲೇ ನಿರ್ಧರಿಸಬೇಕು’ ಎಂದು ಸಮಿತಿ ರಾಜ್ಯ ಘಟಕದ ಕಾರ್ಯದರ್ಶಿ ಅಜಯ್ ಕಾಮತ್ ಆಗ್ರಹಿಸಿದ್ದಾರೆ.

‘ಪರೀಕ್ಷೆಗಳನ್ನು ಶಾಲಾ ಮಟ್ಟದಲ್ಲಿ ನಡೆಸಿದರೂ ಮಂಡಳಿಯಿಂದ ಬರುವ ಪ್ರಶ್ನೆಪತ್ರಿಕೆಗಳು ಪರೀಕ್ಷೆಗಳ ಒತ್ತಡದಲ್ಲಿರುವ ವಿದ್ಯಾರ್ಥಿಗಳ ಮೇಲೆ ಇನ್ನಷ್ಟು ಭಾರ ಉಂಟುಮಾಡುತ್ತವೆ. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ರಾಜ್ಯ ಸರ್ಕಾರವು ಈ ರೀತಿ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ತಜ್ಞರ ಅಭಿಪ್ರಾಯಗಳನ್ನು ಪಡೆಯದೆ, ಅಪ್ರಜಾತಾಂತ್ರಿಕ ಹಾಗೂ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದನ್ನು ಸರ್ಕಾರ ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT