ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್ ಬೆಟ್ಟಿಂಗ್; ₹ 2 ಲಕ್ಷ ಜಪ್ತಿ

Last Updated 6 ನವೆಂಬರ್ 2020, 19:21 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕಿರಣ್ ಜೈನ್ ಹಾಗೂ ದುಂಗರ್ ಚಂದ್ ಬಂಧಿತರು. ಅವರಿಂದ ₹ 2 ಲಕ್ಷ ನಗದು ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆದ ಪಂದ್ಯದ ವೇಳೆ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಮೊಬೈಲ್ ಮೂಲಕವೇ ಸಾರ್ವಜನಿಕರನ್ನು ಸಂಪರ್ಕಿಸಿ ಹಣ ಕಟ್ಟಿಸಿಕೊಳ್ಳುತ್ತಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT