ಸೋಮವಾರ, ಏಪ್ರಿಲ್ 6, 2020
19 °C

ದಕ್ಷಿಣ ಆಫ್ರಿಕಾ – ಇಂಗ್ಲೆಂಡ್‌ ಕ್ರಿಕೆಟ್‌ ಬೆಟ್ಟಿಂಗ್: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟ್ವೆಂಟಿ–20 ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ರೋಷನ್‌ಕುಮಾರ್ (40) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಚಿಕ್ಕಪೇಟೆಯ ಆರ್‌.ಟಿ. ಸ್ಟ್ರೀಟ್‌ನಲ್ಲಿ ಅಂಗಡಿ ಇಟ್ಟುಕೊಂಡಿರುವ ರೋಷನ್‌ಕುಮಾರ್, ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದ. ಆತನ ಅಂಗಡಿ ಮೇಲೆ ದಾಳಿ ಮಾಡಿ ಬಂಧಿಸಲಾಯಿತು’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘ಆರೋಪಿಯಿಂದ ₹ 67,500 ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಆರೋಪಿ ವಿರುದ್ಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು