ಶುಕ್ರವಾರ, ಅಕ್ಟೋಬರ್ 23, 2020
22 °C

ಕ್ರಿಕೆಟ್ ಬೆಟ್ಟಿಂಗ್; ₹ 9.50 ಲಕ್ಷ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಲ್ ಕ್ರಿಕೆಟ್‌ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹ 9.50 ಲಕ್ಷ ಜಪ್ತಿ ಮಾಡಿದ್ದಾರೆ.

ನಗರ್ತಪೇಟೆಯ ಭಾವೇಶ್ ಜೈನ್ (38), ಅರವಿಂದ್ ಜೈನ್ (40) ಹಾಗೂ ಬಿನ್ನಿಮಲ್ ವೃತ್ತದ ವಿಮಲ್ ಜೈನ್ (40) ಬಂಧಿತರು.  

‘ಇತ್ತೀಚೆಗೆ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ ಹಾಗೂ ಚೆನ್ನೈ ಸೂಪರ್ ಕಿಂಗ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಅದೇ ಸಂದರ್ಭದಲ್ಲೇ ಉಪ್ಪಾರಪೇಟೆ ಠಾಣೆ ವ್ಯಾಪ್ತಿಯ ಗಾಂಧಿನಗರ ಬಳಿ ನಿಂತಿದ್ದ ಆರೋಪಿಗಳು, ತಂಡಗಳ ಸೋಲು ಹಾಗೂ ಗೆಲುವು ಲೆಕ್ಕಾಚಾರದಲ್ಲಿ ಸಾರ್ವಜನಿಕರಂದ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಮೊಬೈಲ್ ಹಾಗೂ ಆ್ಯಪ್‌ ಮೂಲಕವೂ ಆರೋಪಿಗಳು ಹಣ ಕಟ್ಟಿಸಿಕೊಳ್ಳುತ್ತಿದ್ದರು. ಆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು. ಮೂರು ಮೊಬೈಲ್‌ಗಳನ್ನೂ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು