ಬುಧವಾರ, ಸೆಪ್ಟೆಂಬರ್ 22, 2021
27 °C

ಕ್ರಿಕೆಟ್ ಬೆಟ್ಟಿಂಗ್; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಬೆಟ್ಟಿಂಗ್ ಕುರಿತು ಸೋಮವಾರ ಮಾಹಿತಿ ಬಂದಿತ್ತು. ರಾಜರಾಜೇಶ್ವರಿನಗರ ಹಾಗೂ ವೈಯಾಲಿಕಾವಲ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಅವರಿಂದ ₹ 6.03 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸೋಲು ಹಾಗೂ ಗೆಲುವಿನ ಲೆಕ್ಕಾಚಾರದಲ್ಲಿ ಆರೋಪಿಗಳು, ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಇದಕ್ಕಾಗಿ ಕೆಲ ಮೊಬೈಲ್ ಆ್ಯಪ್‌ಗಳನ್ನು ಬಳಸುತ್ತಿದ್ದರು. ಫೋನ್‌ ಪೇ, ಗೂಗಲ್‌ ಪೇ ಹಾಗೂ ಇತರ ಆನ್‌ಲೈನ್‌ ವೇದಿಕೆಗಳ ಮೂಲಕವೂ ಹಣದ ವಹಿವಾಟು ನಡೆಸುತ್ತಿದ್ದ ಬಗ್ಗೆ ಮಾಹಿತಿ ಇದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.