ಶನಿವಾರ, ಫೆಬ್ರವರಿ 22, 2020
19 °C

ಭಾರತ– ಬಾಂಗ್ಲಾ ಪಂದ್ಯಕ್ಕೆ ಬೆಟ್ಟಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ– ಬಾಂಗ್ಲಾದೇಶ ನಡುವೆ ಭಾನುವಾರ ನಡೆದ ಟಿ–20 ಕ್ರಿಕೆಟ್‌ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ನಡೆಸುತ್ತಿದ್ದ ಆರೋಪದಡಿ ರೋಹಿತ್‌ ಕುಮಾರ್ ಜೈನ್ (41) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಫ್ರೇಜರ್ ಟೌನ್ ನಿವಾಸಿಯಾದ ಆರೋಪಿ ಮೊಬೈಲ್ ಆ್ಯಪ್ ಹಾಗೂ ಕರೆಗಳ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ ₹3.36 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಹಿರಿಯ ಅಧಿಕಾರಿ ಹೇಳಿದರು.

‘ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯ ಮೌರ್ಯ ವೃತ್ತದಲ್ಲಿ ನಿಂತಿದ್ದ ಆರೋಪಿ ಬೆಟ್ಟಿಂಗ್‌ ಬಗ್ಗೆ ಜನರಿಗೆ ತಿಳಿಸುತ್ತಿದ್ದ. ತಂಡಗಳ ಸೋಲು ಮತ್ತು ಗೆಲುವಿನ ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ಅದೇ ವೇಳೆ ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ’ ಎಂದು ಹೇಳಿದರು.

‘ಕ್ರಿಕೆಟ್ ಮ್ಯಾಚ್‌ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇಂಥ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಡಲಾಗಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು