ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದವನ ಬಂಧನ

Last Updated 13 ನವೆಂಬರ್ 2021, 18:48 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಲಲಿತ್‌ಕುಮಾರ್‌ ಧಾರಿವಾಲ್‌ ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆತನಿಂದ ₹3 ಲಕ್ಷ ನಗದು ಹಾಗೂ ಮೊಬೈಲ್‌ ಜಪ್ತಿ ಮಾಡಿದ್ದಾರೆ.

‘ವಿಶ್ವ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯದ ದಿನ (ನವೆಂಬರ್‌ 11) ಆರೋಪಿಯುಹನುಮಂತನಗರದ ಮೌಂಟ್‌ಜಾಯ್‌ ಬಡಾವಣೆಯ 3ನೇ ಮುಖ್ಯರಸ್ತೆಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ. ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನದ ಸೋಲು ಗೆಲುವಿನ ಬಗ್ಗೆ ಜನರಿಂದ ಜೂಜಿನ ಹಣ ಕಟ್ಟಿಸಿಕೊಳ್ಳುತ್ತಿದ್ದ. ಮೊಬೈಲ್‌ನಲ್ಲೇ ಆತ ವ್ಯವಹರಿಸುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿ ಆತನನ್ನು ಬಂಧಿಸಲಾಯಿತು. ಆರೋಪಿಯ ವಿರುದ್ಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT