ಶನಿವಾರ, ಮೇ 15, 2021
26 °C

ಕ್ರಿಕೆಟ್ ಬೆಟ್ಟಿಂಗ್; ಬುಕ್ಕಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಬುಕ್ಕಿ ಜುಸೆಬ್ ಯೂನಿಸ್ ಅಲಿಯಾಸ್ ಇಮ್ರಾನ್ (46) ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಐಪಿಎಲ್ ಆರಂಭವಾದಾ ಗಿನಿಂದಲೇ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ ₹ 86 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೊಬೈಲ್‌ ಆ್ಯಪ್‌ಗಳ ಮೂಲಕ ಕ್ರಿಕೆಟ್‌ ಸ್ಕೋರ್ ಹಾಗೂ ಪಂದ್ಯಗಳ ಸರಾಸರಿ ನೋಡಿಕೊಂಡು ಸಹಚರರ ಮೂಲಕ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಎಚ್‌ಆರ್‌ಬಿಆರ್ ಲೇಔಟ್ 2ನೇ ಹಂತದಲ್ಲಿರುವ ಉದ್ಯಾನ ಬಳಿ ಬಂದಿದ್ದ ಆರೋಪಿ, ಬೆಟ್ಟಿಂಗ್‌ಗೆ ಹಣ ಕಟ್ಟಿಸಿಕೊಳ್ಳುತ್ತಿದ್ದ. ಅದೇ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.