ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಎನ್. ಕಿರಣ್ ಕುಮಾರ್ (46) ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ₹ 15 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

ಆರೋಪಿ ಎನ್. ಕಿರಣ್ ಕುಮಾರ್

ಆರ್.ಟಿ.ನಗರದ ಗಿಡ್ಡಪ್ಪ ಬ್ಲಾಕ್ ನಿವಾಸಿಯಾದ ಕಿರಣ್ ಕುಮಾರ್, ಐಪಿಎಲ್ ಆರಂಭವಾದಾಗಿನಿಂದಲೂ ಬೆಟ್ಟಿಂಗ್ ನಡೆಸುತ್ತಿದ್ದ. ಮೊಬೈಲ್ ಆ್ಯಪ್, ಜಾಲತಾಣ ಹಾಗೂ ಕರೆ ಮೂಲಕ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

'ಇತ್ತೀಚೆಗೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಂಡಿದ್ದ' ಎಂದರು.

'ಗೆದ್ದವರಿಗೆ ತಾನೇ ಹೋಗಿ ಹಣ ನೀಡುತ್ತಿದ್ದ. ಸೋತವರಿಂದ ಹಣ ವಸೂಲಿ ಮಾಡಲು ಸಹ ತಾನೇ ಹೋಗುತ್ತಿದ್ದ' ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.