ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕ್ರಿಕೆಟ್‌ ಅವಕಾಶ ಆಮಿಷ: ₹ 12.23 ಲಕ್ಷ ವಂಚನೆ

Published 27 ಫೆಬ್ರುವರಿ 2024, 0:30 IST
Last Updated 27 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ತಂಡಗಳ ಪರ ಆಡಲು ಅವಕಾಶ ಕೊಡಿಸುವ ಆಮಿಷವೊಡ್ಡಿ ₹ 12.23 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ರಾಜಾಜಿನಗರದ ಶ್ಯಾಮ್‌ಪ್ರಸಾದ್ ಅವರು ವಂಚನೆ ಸಂಬಂಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ನೀಡಿರುವ ನಿರ್ದೇಶನ ಆಧರಿಸಿ, ಕ್ರಿಕೆಟ್ ತರಬೇತುದಾರ ಗೌರವ್ ಧಿಮಾನ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರರ ಮಗ, ಗಾಂಧಿನಗರದ ಶೇಷಾದ್ರಿ ರಸ್ತೆಯಲ್ಲಿರುವ ಸಂಸ್ಥೆಯೊಂದರಲ್ಲಿ ತರಬೇತಿಗೆ ಸೇರಿದ್ದರು. ಅಲ್ಲಿಯ ತರಬೇತುದಾರ ಗೌರವ್ ಧಿಮಾನ್, ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಆಡಲು ಅವಕಾಶ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ ₹ 12.23 ಲಕ್ಷ ಪಡೆದಿದ್ದರು. ಯಾವುದೇ ಅವಕಾಶ ಕೊಡಿಸಿರಲಿಲ್ಲ. ಹಣ ವಾಪಸು ಕೇಳಿದಾಗ ಜೀವ ಬೆದರಿಕೆಯೊಡ್ಡಿದ್ದರು ಎಂಬುದಾಗಿ ದೂರುದಾರರು ಆರೋಪಿಸುತ್ತಿದ್ದಾರೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT