ಗುರುವಾರ , ಅಕ್ಟೋಬರ್ 17, 2019
27 °C

ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್; ದೆಹಲಿಗೆ ಸಿಸಿಬಿ ತಂಡ

Published:
Updated:

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್‌ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದಿರುವ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಹಲವರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಕೆಪಿಎಲ್‌ ಮಾತ್ರವಲ್ಲದೇ ಅಂತರರಾಷ್ಟ್ರೀಯ ಪಂದ್ಯಗಳಲ್ಲೂ ಮ್ಯಾಚ್‌ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಡೆದಿರುವ ಅನುಮಾನ ಪೊಲೀಸರಿಗೆ ಬಂದಿದೆ. ಆ ಬಗ್ಗೆ ಸಿಕ್ಕಿರುವ ಸುಳಿವು ಆಧರಿಸಿ ಸಿಸಿಬಿ ಪೊಲೀಸರ ತಂಡವೊಂದು ಈಗಾಗಲೇ ದೆಹಲಿಗೆ ಹೋಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

‘ಪ್ರಕರಣ ಸಂಬಂಧ ಕೆಪಿಎಲ್‌ನ ಬೆಳಗಾವಿ ಫ್ಯಾಂಥರ್ಸ ತಂಡದ ಮಾಲೀಕ ಅಲಿ ಅಶ್ಫಾಕ್‌ ತಾರ್ ಹಾಗೂ ರಾಜಸ್ಥಾನದ ಭವೇಶ್ ಬಾಫ್ನಾ ಎಂಬಾತನನ್ನು ಈಗಾಗಲೇ ಬಂಧಿಸಲಾಗಿದೆ. ಅವರ ಜೊತೆ ಒಡನಾಟವಿಟ್ಟುಕೊಂಡಿದ್ದ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರೆಲ್ಲ ದೆಹಲಿಯಲ್ಲಿರುವ ಮಾಹಿತಿ ಸಿಕ್ಕಿದೆ’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಮ್ಯಾಚ್‌ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಜಾಲ ದೇಶದಾದ್ಯಂತ ಹರಡಿರುವ ಮಾಹಿತಿ ಆರೋಪಿಗಳ ವಿಚಾರಣೆಯಿಂದ ಗೊತ್ತಾಗಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿ ವೇಳೆಯೂ ಆರೋಪಿಗಳು ಆಟಗಾರರ ಜೊತೆ ಒಡನಾಟವಿಟ್ಟುಕೊಂಡಿದ್ದ ಮಾಹಿತಿ ಇದೆ. ವಿಚಾರಣೆ ನಡೆಸಿದ ಬಳಿಕವೇ ಸ್ಪಷ್ಟ ಮಾಹಿತಿ ಸಿಗಲಿದೆ’ ಎಂದು ಮಾಹಿತಿ ನೀಡಿದರು. 

Post Comments (+)