ಭಾನುವಾರ, ಜುಲೈ 3, 2022
24 °C

ಮಹಜರು ವೇಳೆ ಕಟ್ಟಡದಿಂದ ಹಾರಿ ಆರೋಪಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಮಹಜರು ವೇಳೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ಧಲಿಂಗಸ್ವಾಮಿ (60) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. 

ಆರೋಪಿ ತಾನು ಬಿಡಿಎ ನೌಕರನೆಂದು ಹೇಳಿಕೊಂಡು ನಿವೇಶನ ಕೊಡಿಸುವುದಾಗಿ ಜನರನ್ನು ವಂಚಿಸುತ್ತಿದ್ದ. ಬಿಡಿಎ ನಿವೇಶನ ಮರು ಹಂಚಿಕೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ₹13 ಲಕ್ಷ ಹಣ ಪಡೆದಿದ್ದ. ಇದಕ್ಕೆ ಬಿಡಿಎ ನಕಲಿ ಮುದ್ರೆ ಬಳಕೆ ಮಾಡಿದ್ದ.

ವಂಚನೆ ಸಂಬಂಧ ಹನುಮಂತ ನಗರ ಠಾಣೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಫೆ.24ರಂದು ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯದ ಮೂಲಕ ಆರೋಪಿಯನ್ನು ಕಸ್ಟಡಿಗೆ ಪಡೆದಿದ್ದರು.  

ಮಂಡ್ಯ ಮೂಲದ ಸಿದ್ಧಲಿಂಗಸ್ವಾಮಿ ವಿದ್ಯಾರಣ್ಯಪುರದ ಅಪಾರ್ಟ್‌ಮೆಂಟ್‌ ಸಮುಚ್ಛಯವೊಂದರಲ್ಲಿ ತನ್ನ ಕುಟುಂಬದೊಂದಿಗೆ ವಾಸವಿದ್ದ. ತನಿಖೆ ವೇಳೆ ತನ್ನ ಮನೆಯಲ್ಲಿ ಕೆಲವು ವಸ್ತುಗಳು ಇಟ್ಟಿರುವುದಾಗಿ ಹೇಳಿದ್ದ. ಇದಕ್ಕಾಗಿ ಪೊಲೀಸರು ಮಹಜರು ನಡೆಸಲು ಮನೆಗೆ ಕರೆ ತಂದಿದ್ದರು. ಮಹಜರು ವೇಳೆ ಅಡುಗೆ ಮನೆಯ ಮೂಲಕ ಕಟ್ಟಡದಿಂದ ಕೆಳಗೆ ಹಾರಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು