ಭಾನುವಾರ, ಮಾರ್ಚ್ 26, 2023
23 °C

ಡ್ರಗ್ಸ್ ಪ್ರಕರಣ: ಆಫ್ರಿಕಾ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆಫ್ರಿಕಾದ ಬೆನಾಲ್ಡ್ ಉಡೆನ್ನಾ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 12 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. 2014ರಲ್ಲಿ ಭಾರತಕ್ಕೆ ಬಂದಿದ್ದ ಈತ, ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ.

'ಪ್ರಕರಣದಲ್ಲಿ ಬ್ಲಾಕೀ, ಕೋಕ್ ಹಾಗೂ ಜಾನ್ ಎಂಬ ಮೂವರು ಡ್ರಗ್ಸ್ ಪೆಡ್ಲರ್‌ಗಳು ಇರುವುದಾಗಿ ತಿಳಿದು ಬಂದಿತ್ತು. ಆದರೆ, ಬಂಧಿತ ಆರೋಪಿ ಬೆನಾಲ್ಡ್ ಉಡೆನ್ನಾನೇ ಈ ಮೂರು ಹೆಸರಿನಲ್ಲಿ ಡ್ರಗ್ಸ್ ಪೂರೈಸುತ್ತಿದ್ದ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ' ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು