ಮಂಗಳವಾರ, ಸೆಪ್ಟೆಂಬರ್ 28, 2021
21 °C

ಮಾರಕಾಸ್ತ್ರ ಜಪ್ತಿ:7 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಶ್ಚಿಮ ವಿಭಾಗದ ಪೊಲೀಸರು ಎರಡು ಪ್ರಕರಣಗಳಲ್ಲಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಚಾಮರಾಜಪೇಟೆಯ ಮೊಮೀನ್ ಪಾಷಾ, ಅನ್ವರ್ ಪಾಷಾ, ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್‌ನ ಕೌಶಿಕ್, ವೀರ, ಜೈಕಾರ್, ರಾಜು, ಕಾರ್ತಿಕ್ ಬಂಧಿತ ಆರೋಪಿಗಳು.

‘ಚಾಮರಾಜಪೇಟೆ ಹಾಗೂ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಗಳಲ್ಲಿ ರೌಡಿ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಇಬ್ಬರು ಮತ್ತು ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಐದು ಮಂದಿ ಸಿಕ್ಕಿಬಿದ್ದರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿ, ಶಸ್ತ್ರಾಸ್ತ್ರ ಕಾಯ್ದೆಯಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

33 ಮಂದಿಗೆ ವೈದ್ಯಕೀಯ ಪರೀಕ್ಷೆ:‘ಮಾದಕ ವಸ್ತುಗಳನ್ನು ಸೇವಿಸಿರುವ ಶಂಕೆಯ ಮೇರೆಗೆ ಎರಡೂ ಠಾಣಾ ವ್ಯಾಪ್ತಿಗಳಲ್ಲಿ ಹಲವರ ಮನೆಗಳಲ್ಲಿ ಪರಿಶೀಲನೆ ನಡೆಸಲಾಯಿತು. ಒಟ್ಟು 33 ಮಂದಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು.  ಹೊರ ರಾಜ್ಯಗಳ ಡ್ರಗ್‌ ಪೆಡ್ಲರ್‌ಗಳ ಜೊತೆ ಸಂಪರ್ಕ ಇರುವ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು