ಮಂಗಳವಾರ, ಸೆಪ್ಟೆಂಬರ್ 21, 2021
21 °C

ಬೆದರಿಸಿ ಆಟೊ ಸಹಿತ ಪರಾರಿ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಆಟೊ ಹತ್ತಿ, ಚಾಲಕನನ್ನು ಬೆದರಿಸಿ ಆಟೊದೊಂದಿಗೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಗೋರಿಪಾಳ್ಯದ ತಬ್ರೇಜ್ ಶರೀಫ್ (27), ಜಾಫರ್ ಪಾಷಾ (32) ಹಾಗೂ ತಬ್ರೇಜ್ ಪಾಷಾ (20) ಬಂಧಿತರು.

ಸೋಮವಾರ ರಾತ್ರಿ 8.30ರ ವೇಳೆಗೆ ಜೆ.ಜೆ.ನಗರದ ಬಳಿ ಆಟೊ ಹತ್ತಿದ್ದ ಆರೋಪಿಗಳು, ಕಲಾಸಿಪಾಳ್ಯಕ್ಕೆ ಹೋಗಲು ತಿಳಿಸಿದ್ದರು. ಪ್ರದೀಪ್ ವೃತ್ತದ ಬಳಿ ಬಂದ ಕೂಡಲೇ ಚಾಲಕನಿಗೆ ಚಾಕು ತೋರಿಸಿ ಬೆದರಿಸಿದ್ದರು. ಬಳಿಕ ಚಾಲಕನನ್ನು ಕೆಳಗೆ ಇಳಿಸಿ, ಆಟೊದೊಂದಿಗೆ ಪರಾರಿಯಾಗಿದ್ದರು.

ಈ ಸಂಬಂಧ ಆಟೊ ಚಾಲಕ ಕಲಾಸಿಪಾಳ್ಯ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಆಟೊ ರಿಕ್ಷಾ ಹಾಗೂ ಮಾರಕಾಸ್ತ್ರ ಜಪ್ತಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು