ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ದ್ವಿಚಕ್ರ ವಾಹನ ಕಳ್ಳತನ: ಇಬ್ಬರು ಬಾಲಕರು ವಶಕ್ಕೆ

Last Updated 10 ಜೂನ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಪ್ರಕರಣದಲ್ಲಿ ಇಬ್ಬರು ಬಾಲಕರನ್ನು ಮಾಗಡಿ ರಸ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಆಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಬಾಲಕರೇ ಕೃತ್ಯ ಎಸಗಿರುವುದು ಗೊತ್ತಾಯಿತು. ಹೀಗಾಗಿ, ಅವರನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಕದ್ದ ದ್ವಿಚಕ್ರ ವಾಹನಗಳನ್ನು ವ್ಹೀಲಿ ಹಾಗೂ ಜಾಲಿರೈಡ್‌ಗಾಗಿ ಬಾಲಕರು ಬಳಸುತ್ತಿದ್ದರು. ನಂತರ ಬೇರೆಯವರಿಗೆ ಮಾರಾಟ ಮಾಡುತ್ತಿದ್ದರು. ಇವರಿಂದ ₹ 5 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಸಿಟಿ ಮಾರ್ಕೆಟ್, ವಿಜಯನಗರ, ಅಶೋಕನಗರ, ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಇತರೆ ಠಾಣೆ ವ್ಯಾಪ್ತಿಯಲ್ಲೂ ಬಾಲಕರು ಕೃತ್ಯ ಎಸಗಿರುವುದು ತಿಳಿದುಬಂದಿದೆ’ ಎಂದೂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT