ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ.ರವಿ ವಿರುದ್ಧ ಪೊಲೀಸರಿಗೆ ದೂರು

Last Updated 19 ಮೇ 2021, 19:58 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದು, ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹನುಮಂತ ನಗರ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ತೇಜೇಶ್ ಕುಮಾರ್ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದಾರೆ.

‘ಸಿ.ಟಿ.ರವಿ ಅವರು ಕೊರೊನಾ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲು ಟೂಲ್‌ಕಿಟ್ ರೂಪಿಸಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ’.

‘ಇಡೀ ದೇಶ ಕೊರೊನಾದಿಂದ ತತ್ತರಿಸುತ್ತಿರುವಾಗ ಜನರಿಗೆ ಸುಳ್ಳು ಸಂದೇಶ ರವಾನಿಸಿ, ಅವರಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡುತ್ತಿರುವ ರವಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್‌ ಮಾಡಿಸಿ, ಬೇರೆಯವರಿಗೆ ನೀಡುತ್ತಿದ್ದಾರೆ’ ಎಂದೂ ಸಿ.ಟಿ.ರವಿ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು’ ಎಂದು ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT