ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ ₹ 10 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

‘ಅರುಣ್ ಜೈನ್ ಹಾಗೂ ನವೀನ್ ಬಂಧಿತರು. ಆನ್‌ಲೈನ್ ಹಾಗೂ ಆ್ಯಪ್‌ಗಳ ಮೂಲಕ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.

’ಐಪಿಎಲ್ ಆರಂಭವಾದಾಗಿನಿಂದಲೂ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಶುಕ್ರವಾರ ರಾತ್ರಿ ನಡೆದ ಪಂದ್ಯಕ್ಕೂ ಹಣ ಕಟ್ಟಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.