ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹60 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

Last Updated 13 ಏಪ್ರಿಲ್ 2021, 4:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಎಚ್‌.ಎಸ್‌.ಆರ್‌.ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡಿನ ಮೊಹಮ್ಮದ್ ಮುಸ್ತಾಕ್ (31), ಮೊಹ್ಮದ್ ಆಶೀಕ್ (19), ದಕ್ಷಿಣ ಕನ್ನಡ ಜಿಲ್ಲೆಯ ಸಮೀರ್ (28) ಹಾಗೂ ಮೊಹಮ್ಮದ್ ಅಫ್ರಿದಿ (23) ಬಂಧಿತರು.

‘ಆರೋಪಿಗಳಿಂದ ₹15 ಲಕ್ಷ ಮೌಲ್ಯದ 48 ಕೆ.ಜಿ. ಗಾಂಜಾ, ₹45 ಲಕ್ಷ ಮೌಲ್ಯದ 1.34 ಕೆ.ಜಿ ಹ್ಯಾಷ್‌ ಆಯಿಲ್, ಕೃತ್ಯಕ್ಕೆ ಬಳಸುತ್ತಿದ್ದ ತೂಕದ ಯಂತ್ರ, ಸ್ಲೀಪ‍ರ್ ಕೋಚ್ ಬಸ್, ಬೊಲೆರೋ ವಾಹನ, ₹4,700 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳು ಹೊರಗಿನಿಂದ ಗಾಂಜಾ ಹಾಗೂ ಮಾದಕ ವಸ್ತುಗಳನ್ನು ತಂದು ಇಲ್ಲಿನ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧಮಾದಕವಸ್ತುಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್) ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ಬರ್ ಎಂಬಾತನಿಗೆ ಶೋಧ ನಡೆಸಲಾಗುತ್ತಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT