ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 91 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಬಂಧನ

Last Updated 28 ಏಪ್ರಿಲ್ 2021, 21:13 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡಲು ಸಜ್ಜಾಗಿದ್ದ ಅಂತರರಾಜ್ಯ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹91.30 ಲಕ್ಷ ಬೆಲೆ ಬಾಳುವ 104 ಕೆ.ಜಿ.ಜಪ್ತಿ ಮಾಡಿದ್ದಾರೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕಲ್ಲಪಲ್ಲಿ ನಾಗೇಂದ್ರ (39) ಬಂಧಿತ ಆರೋಪಿ.

‘ಈತಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಚಿಂತಪಲ್ಲಿ ಅರಣ್ಯದಿಂದ ಗಾಂಜಾ ತರಿಸಿಕೊಳ್ಳುತ್ತಿದ್ದ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಿಂದ ಲಾಕ್‌ಡೌನ್‌ ಜಾರಿ ಮಾಡಿರುವುದನ್ನು ಗಮನಿಸಿ, ಈ ವೇಳೆ ಗಾಂಜಾ ಮಾರಾಟದ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂಬ ಉದ್ದೇಶ ಹೊಂದಿದ್ದ’.

‘ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಕಾರಿನಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿತ್ತು. ಇದರ ಅನ್ವಯ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT