ಬೆಂಗಳೂರು: ಹಲಸೂರು ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಿವ್ಯಾ (30) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿರುವ ಆರೋಪದಡಿ ಪತಿ ಅರವಿಂದ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಸ್ಥಳೀಯ ನಿವಾಸಿ ದಿವ್ಯಾ, ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಮನೆಯ ಕೊಠಡಿಯಲ್ಲಿದ್ದ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ನೀಡಿರುವ ದೂರು ಆಧರಿಸಿ ಪತಿ ಹಾಗೂ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ದಿವ್ಯಾ ಹಾಗೂ ಅರವಿಂದ್, 2014ರಲ್ಲಿ ಮದುವೆಯಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ದಂಪತಿ ನಡುವೆ ಇತ್ತೀಚೆಗೆ ಜಗಳ ಶುರುವಾಗಿತ್ತು. ದಿವ್ಯಾ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿ ಪತಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ದೂರಿದ್ದಾರೆ’ ಎಂದು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.