ಬೆಂಗಳೂರು: ವೃದ್ಧ ತಂದೆ-ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶ್ರೀರಂಗಪಟ್ಟಣದ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಬಂಧಿತ ಆರೋಪಿ. ತಂದೆ, ತಾಯಿಯನ್ನು ಕೊಲೆ ಮಾಡಿದ ಬಳಿಕ, ಅವರಿಗೆ ಪಿಂಡ ಬಿಟ್ಟು ತಲೆ ಬೋಳಿಸಿಕೊಂಡಿದ್ದ.ಕೆಲ ದಿನಗಳ ಬಳಿಕ ಶ್ರೀರಂಗಪಟ್ಟಣದಲ್ಲಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ.

ಆದರೆ, ಈ ವೇಳೆ ಆತನ ಎರಡು ಕಾಲು ಮುರಿದಿತ್, ಜೀವಕ್ಕೆ ಯಾವುದೇ ಅಪಾಯ ಉಂಟಾಗಿರಲಿಲ್ಲ. ಹೀಗಾಗಿ, ಆತನೇ ತನ್ನ ಸಂಬಂಧಿಕರಿಗೆ ಕರೆ ವಿಷಯ ತಿಳಿಸಿದ್ದ ಎನ್ನಲಾಗಿದೆ. ಅವರು ಪೊಲೀಸರಿಗೆ ವಿಷಯ ತಲುಪಿಸಿದ್ದಿ, ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ತಂದೆ ನರಸಿಂಹ ರಾಜು (70) ಮತ್ತು ತಾಯಿ ಸರಸ್ವತಿ (64) ಅವರನ್ನು ಸಂತೋಷ್ ಬುಧವಾರ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಸಂತೋಷ್ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಮಗನ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.