ಉದ್ಯಮಿ ಮಗನ ಮನೆ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಸದಾಶಿವನಗರದಲ್ಲಿರುವ ಉದ್ಯಮಿಯೊಬ್ಬರ ಮಗನ ಮನೆ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
‘ಉದ್ಯಮಿಯ ಮಗ, ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿದ್ದ ಮಾಹಿತಿ ಎನ್‌ಸಿಬಿ ಅಧಿಕಾರಿಗಳಿಗೆ ಸಿಕ್ಕಿತ್ತು. ಅದರನ್ವಯ ಅಧಿಕಾರಿಗಳು ದಾಳಿ ಮಾಡಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ’ ಎಂದು ಮೂಲಗಳು ಹೇಳಿವೆ. ದಾಳಿ ಬಗ್ಗೆ ಎನ್‌ಸಿಬಿ ಅಧಿಕಾರಿಗಳು ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.