ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯನ್ನು ಪ್ರೇಮಿಸಿದ್ದ ಹುಡುಗನೊಂದಿಗೆ ಸ್ನೇಹಿತರಿಬ್ಬರು ಸೇರಿ ಮದುವೆ ಮಾಡಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.

‘ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಮೇರೆಗೆವಿದ್ಯಾರ್ಥಿಯನ್ನು ಮದುವೆಯಾಗಿದ್ದ ಲಗ್ಗೆರೆಯ ದರ್ಶನ್ ಹಾಗೂ ಮದುವೆ ಮಾಡಿಸಿದ್ದ ವಿಜಯನಗರದ ಚಂದ್ರು ಎಂಬ ಯುವಕರನ್ನು ಬಂಧಿಸಲಾಗಿದೆ. ಇದರಲ್ಲಿ ಭಾಗಿಯಾಗಿದ್ದ ಗಿರೀಶ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಕಳೆದ ವರ್ಷ ಲಾಕ್‌ಡೌನ್ ವೇಳೆ ಶ್ರೀನಗರದಲ್ಲಿ ವಾಸವಿದ್ದ ವಿದ್ಯಾರ್ಥಿನಿಗೆ ಆನ್‌ಲೈನ್ ತರಗತಿಗಾಗಿ ಪೋಷಕರು ಮೊಬೈಲ್ ಕೊಡಿಸಿದ್ದರು. ಆಕೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಖಾತೆ ತೆರೆದಿದ್ದಳು.ಇನ್‌ಸ್ಟಾಗ್ರಾಂ ಮೂಲಕ ದರ್ಶನ್‌ನ ಪರಿಚಯವಾಗಿ ಪ್ರೀತಿಸುತ್ತಿದ್ದರು’.

‘ಈ ವಿಚಾರವನ್ನು ದರ್ಶನ್ ತನ್ನ ಸ್ನೇಹಿತ ಚಂದ್ರು ಬಳಿ ಹೇಳಿಕೊಂಡಿದ್ದ. ಇಬ್ಬರಿಗೂ ಮದುವೆ ಮಾಡಿಸುವುದಾಗಿ ತಿಳಿಸಿದ್ದ ಚಂದ್ರ, ಗಿರೀಶ್‌ನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ. ಜೂನ್‌ನಲ್ಲಿ ವಿದ್ಯಾರ್ಥಿನಿಗೆ ಮನೆ ಬಿಟ್ಟು ಬರುವಂತೆ ಹೇಳಿ, ದೇವಸ್ಥಾನವೊಂದರಲ್ಲಿ ಮದುವೆ ಮಾಡಿಸಿದ್ದರು. ಬಳಿಕ ವಿಜಯನಗರದಲ್ಲಿ ಮನೆಯ ವ್ಯವಸ್ಥೆಯೂ ಮಾಡಿದ್ದರು.’

‘ಮಗಳು ಮನೆಗೆ ವಾಪಸ್ ಆಗದ ಕಾರಣ ಪೋಷಕರು ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಇನ್‌ಸ್ಟಾಗ್ರಾಂ ಖಾತೆಯ ನೆರವಿನಿಂದ ಅವರನ್ನು ಪತ್ತೆ ಹಚ್ಚಲಾಯಿತು. ಬಾಲಕಿಯನ್ನು ಪೋಷಕರಿಗೆ ಒಪ್ಪಿಸಲಾಗಿದ್ದು, ಆರೋಪಿಗಳ ವಿರುದ್ಧ ಬಾಲ್ಯವಿವಾಹ, ಅಪಹರಣ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.