ಡ್ರಗ್ಸ್ ಮಾರಾಟ ದಂಧೆ: ಹಲವರ ಬಂಧನ

ಬೆಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಹಾಗೂ ಎಂಡಿಎಂಎ ಸೇರಿದಂತೆ ಡ್ರಗ್ಸ್ ಪೂರೈಸುತ್ತಿದ್ದ ವಿದೇಶಿ ಪ್ರಜೆ ಹಾಗೂ ದಂಧೆಯಲ್ಲಿ ಭಾಗಿಯಾಗಿದ್ದ 10 ಮಂದಿ ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಮಾರಾಟ ದಂಧೆಯ ಮೇಲೆ ಜೆ.ಸಿ.ನಗರ ಹಾಗೂ ಸಂಜಯನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.
‘ಜೆ.ಸಿ.ನಗರ ಠಾಣಾ ವ್ಯಾಪ್ತಿಯ ಗ್ಯಾರೇಜುವೊಂದರ ಬಳಿ ಗಾಂಜಾ ಮಾರುತ್ತಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು. ಇವರು ಡಾರ್ಕ್‌ವೆಬ್ ಹಾಗೂ ವಿಕ್ಕರ್ ಮೆಸೆಂಜರ್ ಮುಖಾಂತರ ಗಾಂಜಾ ಹಾಗೂ ವೀಡಾಯಿಲ್ ತರಿಸಿಕೊಂಡು, ಸ್ನೇಹಿತರಿಗೆ ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದರು’.
‘ಇವರ ಮಾಹಿತಿ ಮೇರೆಗೆ ಮತ್ತೆ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು. ಇವರಿಂದ ಒಂದು ಕೆ.ಜಿ ಗಾಂಜಾ, ಲ್ಯಾಪ್‌ಟಾಪ್, ಮೊಬೈಲ್, ಕಾರು ಹಾಗೂ ಜಪ್ತಿ ಮಾಡಲಾಯಿತು’ ಎಂದು ಪೊಲೀಸರು ತಿಳಿಸಿದರು. ಆದರೆ, ಆರೋಪಿಗಳ ವಿವರಗಳನ್ನು ಪೊಲೀಸರು ಬಹಿರಂಗ ಪಡಿಸಲಿಲ್ಲ.
ಡ್ರಗ್ಸ್ ಪೂರೈಸುತ್ತಿದ್ದ ವಿದೇಶಿ ಪ್ರಜೆ: ವಿದ್ಯಾರ್ಥಿಯೊಬ್ಬನಿಗೆ ಕೊಕೇನ್ ಹಾಗೂ ಎಂಡಿಎಂಎ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಮೇರೆಗೆ ಕಮ್ಮನಹಳ್ಳಿಯ ಲಿಂಗರಾಜಪುರದಲ್ಲಿ ವಾಸವಿದ್ದ ಪ್ರದೀಪ್ ಕುಮಾರ್ (24) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.