ಬೆಂಗಳೂರು: ಡ್ರಗ್ಸ್ ಸಾಗಣೆ ಹಾಗೂ ಮಾರಾಟ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ನಗರದ ಎರಡು ಕಡೆ ದಾಳಿ ಮಾಡಿದ್ದಾರೆ. ₹ 15 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ.

‘ನಗರದಲ್ಲಿ ತಮ್ಮದೇ ಜಾಲ ರೂಪಿಸಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ, ಇಬ್ಬರು ಪೆಡ್ಲರ್ಗಳು ಸೇರಿ 6 ಮಂದಿಯನ್ನು
ಸೆರೆ ಹಿಡಿಯಲಾಗಿದೆ. ಅವರ ಬಳಿ 28 ಕೆ.ಜಿ ಗಾಂಜಾ ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.

‘ಆಂಧ್ರಪ್ರದೇಶದ ಪೆಡ್ಲರ್ಗಳ ಜೊತೆ ನಂಟು ಹೊಂದಿದ್ದ ಆರೋಪಿಗಳು, ಅವರಿಂದಲೇ ಗಾಂಜಾ ಖರೀದಿ ಮಾಡುತ್ತಿದ್ದರು. ನಂತರ, ಬೆಂಗಳೂರಿಗೆ ಗಾಂಜಾ ತಂದು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು’ ಎಂದೂ ಅವರು ತಿಳಿಸಿದರು.

‘ಆರೋಪಿಗಳ ಕೃತ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. ಗಾಂಜಾ ಇರಿಸಿದ್ದ ಸ್ಥಳಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.