ಭಾನುವಾರ, ಜುಲೈ 3, 2022
24 °C

ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ನಕಲಿ ವಿಡಿಯೊ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ನಕಲಿ ವಿಡಿಯೊ ಹರಿಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸಮೀರವುಲ್ಲಾ ಎಂದು ಗುರುತಿಸಲಾಗಿದೆ. ಈತ ವಿಡಿಯೊವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ. ಅದು ವೈರಲ್ ಆಗಿತ್ತು‌. ಈ ವಿಡಿಯೊ ನಕಲಿ ಎಂಬುದನ್ನು ತಿಳಿದ ಸಿಸಿಬಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದರು. 

ಭಾನುವಾರ ಮಧ್ಯಾಹ್ನವೇ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

‘ಬೇರೆ ರಾಜ್ಯದ ವಿಡಿಯೊವನ್ನು ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಆರೋಪಿ ಬರೆದುಕೊಂಡಿದ್ದ. ವೈದ್ಯರ ಕೊಠಡಿ ಎದುರು ಜನರು ಗುಂಪಾಗಿ ನಿಂತುಕೊಂಡಿದ್ದರು. ಜನ ಸಂದಣಿಯೂ ಹೆಚ್ಚಿತ್ತು. ಈ ದೃಶ್ಯ ವಿಡಿಯೊದಲ್ಲಿತ್ತು‌. ಪರಿಶೀಲನೆ ನಡೆಸಿದಾಗ ಇದು ವಿಕ್ಟೊರಿಯಾ ಆಸ್ಪತ್ರೆಯದ್ದು ಅಲ್ಲವೆಂಬುದು ತಿಳಿಯಿತು’ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು