ಶನಿವಾರ, ಜುಲೈ 31, 2021
21 °C

ಮೂತ್ರಪಿಂಡ ಮಾರುವುದಾಗಿ ಜಾಹೀರಾತು: ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂತ್ರಪಿಂಡ ಮಾರಾಟ ಹಾಗೂ ಖರೀದಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡಿ, ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಗ್ಯಾಂಗ್‌ನಲ್ಲಿದ್ದ ವಿದೇಶಿ ಪ್ರಜೆಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾದ ಡ್ನೂಡಿಮ್ ಒಬಿನ್ನಾ ಕಿಂಗ್ ಲೈ ಬಂಧಿತ ಆರೋಪಿ. ಈತ ಈ ದಂಧೆ ಕಿಂಗ್‌ಪಿನ್‌ನ ಸಹಚರ ಎನ್ನಲಾಗಿದೆ.

‘ಈ ದಂಧೆಯಲ್ಲಿ ಹಲವರು ಭಾಗಿಯಾಗಿದ್ದು, ಕರ್ನಾಟಕ, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ಸುಳ್ಳು ಜಾಹೀರಾತು ಮೂಲಕ ಜನರಿಗೆ ವಂಚಿಸಿದ್ದಾರೆ. ಇವರ ಜಾಹೀರಾತುಗಳನ್ನು ನೋಡುತ್ತಿದ್ದ ಹಲವರು ಮೂತ್ರಪಿಂಡ ಖರೀದಿಸಲು ಹಾಗೂ ಮಾರಾಟ ಮಾಡಲು ಇವರನ್ನು ಸಂಪರ್ಕಿಸುತ್ತಿದ್ದರು. ವೈದ್ಯಕೀಯ ಪರೀಕ್ಷೆಯ ನೆಪದಲ್ಲಿ ಜನರಿಂದ ಮುಂಗಡವಾಗಿ ಹಣ ಪಡೆದು ವಂಚಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು