ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಯ ಕೊಲೆಗೈದು ಪಾರ್ಶ್ವವಾಯು ಎಂದಿದ್ದ ಆರೋಪಿ ಬಂಧನ

Last Updated 4 ಜುಲೈ 2021, 21:27 IST
ಅಕ್ಷರ ಗಾತ್ರ

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಪಾರ್ಶ್ವವಾಯು ಸಮಸ್ಯೆಯಿಂದ ಮೃತಪಟ್ಟಿದ್ದಾಗಿ ಹೇಳಿ
ಕೊಂಡಿದ್ದ ಆರೋಪದಡಿ ಪತಿಯನ್ನು ಮೈಕೊ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ಬಿಟಿಎಂ ಬಡಾವಣೆ ಎರಡನೇ ಹಂತದ ನಿವಾಸಿ ಅಜಿತ್ ಬಂಧಿತ ಆರೋಪಿ. ಸಾನಿಯಾ ಕೊಲೆಯಾಗಿದ್ದ ಮಹಿಳೆ.

‘ಎರಡು ವರ್ಷಗಳ ಹಿಂದೆಯಷ್ಟೇ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಕೆಲವೇ ತಿಂಗಳ ನಂತರ ಪತಿಅಜಿತ್ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಮೇ ತಿಂಗಳಲ್ಲಿ ಜಗಳ ವಿಕೋಪಕ್ಕೆ ತಿರುಗಿ, ಪತ್ನಿಯ ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದಿದ್ದ. ಇದರಿಂದ ಕುಸಿದು ಬಿದ್ದಿದ್ದಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯ
ಲಾಯಿತು. ಅಷ್ಟರಲ್ಲಿಸಾನಿಯಾ ಮೃತಪಟ್ಟಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಆದರೆ, ಪತ್ನಿಯ ಮನೆಯವರಿಗೆ ಆಕೆ ಪಾರ್ಶ್ವವಾಯು ಸಮಸ್ಯೆಯಿಂದ ಮೃತಪಟ್ಟಿದ್ದಾಗಿ ಸುಳ್ಳು ಹೇಳಿದ್ದ.ಆದರೂ ಅನುಮಾನಗೊಂಡಿದ್ದ ಕುಟುಂಬದವರು ಅಜಿತ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಬಲವಾದ ಹೊಡೆತದಿಂದ ಸಾನಿಯಾ ಮೃತಪಟ್ಟಿದ್ದಾಗಿ ವರದಿಯಲ್ಲಿ ದೃಢಪಟ್ಟಿತ್ತು. ಬಂದಿತ್ತು. ಪತಿ ಅಜಿತ್‌ನನ್ನು ಬಂಧಿಸಲಾಗಿದೆ’ ಎಂದೂ ಮಾಹಿತಿ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT