ಶನಿವಾರ, ಮೇ 21, 2022
25 °C

ಕೊಲೆ: 2ನೇ ಪತ್ನಿಯಿಂದ ಸುಪಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೃಷ್ಣಮೂರ್ತಿ ಎಂಬುವರ ಕೊಲೆ ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಅಜಯ್, ಅಂಥೋನಿ, ದೀನು, ಶಿವಕುಮಾರ್, ಸ್ಟೀಫನ್, ಅರುಣ್ ಬಂಧಿತರು. ಅವರೆಲ್ಲ ಕೆ.ಆರ್.ಪುರ ಹಾಗೂ ಕೋಲಾರದವರು. ಅವರಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಟೈಲ್ಸ್‌ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ ಅವರಿಗೆ ಇಬ್ಬರು ಪತ್ನಿಯರಿದ್ದಾರೆ. ಎರಡನೇ ಪತ್ನಿ ಜೊತೆ ನಿತ್ಯವೂ ಜಗಳ ಮಾಡಿ ಹಲ್ಲೆ ಮಾಡುತ್ತಿದ್ದರು. ಅದೇ ಕಾರಣಕ್ಕೆ ಎರಡನೇ ಪತ್ನಿ ಆರೋಪಿಗಳಿಗೆ ಸುಪಾರಿ ಕೊಟ್ಟು ಕೃಷ್ಣಮೂರ್ತಿ ಅವರನ್ನು ಕೊಲೆ ಮಾಡಿಸಿರುವ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಜುಲೈ 2ರಂದು ರಾತ್ರಿ ಕೃಷ್ಣಮೂರ್ತಿ ಅವರು ಅಂಬೇಡ್ಕರ್ ಕಾಲೇಜು ಬಳಿ ಹೊರಟಿದ್ದರು. ಆರೋಪಿಗಳು, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ. ಪತ್ನಿಯನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು