ಗುರುವಾರ , ಸೆಪ್ಟೆಂಬರ್ 29, 2022
26 °C

ಬೆಂಗಳೂರು: ಡ್ರಾಪ್‌ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಾಪ್ ನೀಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗುತ್ತಿದ್ದು, ಈ ಸಂಬಂಧ ವಿವೇಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಬುಧವಾರ ರಾತ್ರಿ ನಡೆದಿರುವ ಕೃತ್ಯದ ಬಗ್ಗೆ 25 ವರ್ಷದ ಯುವತಿ ದೂರು ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ನಗರದ ನಿವಾಸಿಯಾಗಿರುವ ಯುವತಿ ಈಜಿಪುರ ಬಳಿ ಹೊರಟಿದ್ದರು. ಡ್ರಾಪ್ ನೀಡುವ ನೆಪದಲ್ಲಿ ಅವರನ್ನು ಬೈಕ್‌ನಲ್ಲಿ ಹತ್ತಿಸಿಕೊಂಡಿದ್ದ ಆರೋಪಿಗಳು, ಹುಸ್ಕೂರು ಬಳಿ ಕರೆದೊಯ್ದಿದ್ದರು. ಇಬ್ಬರೂ ಆರೋಪಿಗಳು ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ವಿಷಯವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದರು. ಗುರುವಾರ ಠಾಣೆಗೆ ಬಂದ ಯುವತಿ ದೂರು ನೀಡಿದ್ದಾರೆ’ ಎಂದು ತಿಳಿಸಿವೆ.

‘ಆರೋಪಿಗಳು ಕಂಪನಿಯೊಂದರ ಕ್ಯಾಬ್ ಚಾಲಕರೆಂದು ಗೊತ್ತಾಗಿದೆ’ ಎಂದು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು