ಮಂಗಳವಾರ, ಮಾರ್ಚ್ 21, 2023
20 °C

ಸಚಿವ ಸೋಮಶೇಖರ್ ಹೆಸರಲ್ಲಿ ವಂಚನೆ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಹಣಕ್ಕಾಗಿ ಬೇಡಿಕೆ ಇಟ್ಟಿರುವ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಚಿವರ ಹೆಸರಿನಲ್ಲಿ ವಂಚಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಸ್.ಟಿ.ಸೋಮಶೇಖರ್ ಆಪ್ತ ಸಹಾಯಕ ಚೇತನ್ ಎಂಬುವರು ಕೇಂದ್ರ ಸೆನ್‌ ಠಾಣೆಗೆ ದೂರು ನೀಡಿದ್ದಾರೆ.

‘ಫೇಸ್‌ಬುಕ್‌ನಲ್ಲಿ ಎಸ್‌.ಟಿ.ಸೋಮಶೇಖರ್‌ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ, ಆರೋಪಿಗಳು ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ’.

‘ಮೊಬೈಲ್‌ ಸಂಖ್ಯೆಯೊಂದನ್ನು ನೀಡಿ ಫೋನ್‌ ಪೇ ಮೂಲಕ ಹಣ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವರ ಹೆಸರಿಗೆ ಕಳಂಕ ಉಂಟು ಮಾಡುತ್ತಿರುವ ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು’ ಎಂದು ಚೇತನ್ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು