ಮಂಗಳವಾರ, ಜೂನ್ 28, 2022
23 °C

ಬೆಂಗಳೂರು: ಚಿಂದಿ ಆಯುತ್ತ ಮನೆ ಗುರುತಿಸಿ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಿಂದಿ ಆಯುತ್ತ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

‘ಪಶ್ಚಿಮ ಬಂಗಾಳದ ಸಮೀರ್ ಎರಾನ್ ಹಾಗೂ ಮೊಹಮ್ಮದ್ ದಿನ್ನು ಬಂಧಿತರು. ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದ ಅವರಿಬ್ಬರು, ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಅವರಿಂದ ₹ 20 ಲಕ್ಷ ಮೌಲ್ಯದ 390 ಗ್ರಾಂ ಚಿನ್ನಾಭರಣ ಹಾಗೂ ಆಟೊ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರ ಹೇಳಿದರು.

‘ಬಾಗಲಗುಂಟೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ನಿತ್ಯವೂ ಚಿಂದಿ ಆಯುತ್ತಿದ್ದ ಆರೋಪಿಗಳು, ಅದನ್ನು ಗುಜರಿ ಅಂಗಡಿಗೆ ಮಾರಿ ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು. ಹಣ ಸಾಲದಿದ್ದರಿಂದ ಕಳ್ಳತನಕ್ಕೆ ಮುಂದಾಗಿದ್ದರು. ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ, ನಿಗಾ ಇಟ್ಟು ಕಳ್ಳತನ ಮಾಡುತ್ತಿದ್ದರು’ ಎಂದೂ ತಿಳಿಸಿದರು.

‘ದೂರುದಾರರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಮೇ 3ರಂದು ದೆಹಲಿಗೆ ಹೋಗಿದ್ದರು. ಬಾಲ್ಕನಿಯ ಬಾಗಿಲಿನ ಗ್ರೀಲ್ ಮುರಿದು ಒಳನುಗ್ಗಿದ್ದ ಆರೋಪಿಗಳು, ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದರು. ಮೇ 9ರಂದು ದೂರುದಾರ ಮನೆಗೆ ಬಂದಿದ್ದಾಗ, ಕಳ್ಳತನ ಆಗಿರುವುದು ಗಮನಕ್ಕೆ ಬಂದಿತ್ತು. ಠಾಣೆಗೆ ದೂರು ನೀಡಿದ್ದರು’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು