ಶುಕ್ರವಾರ, ಅಕ್ಟೋಬರ್ 7, 2022
23 °C

ಕದ್ದ ವಾಹನ ಮಾರಿ ಮೋಜು– ಮಸ್ತಿ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುವ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ ಶಬ್ಬೀರ್ ಪಾಷಾ ಎಂಬುವರನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

‘ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ ಆರೋಪಿ, ಕದ್ದ ವಾಹನಗಳ ಮಾರಾಟದಿಂದ ಬರುತ್ತಿದ್ದ ಹಣದಲ್ಲಿ ಮೋಜು–ಮಸ್ತಿ ಮಾಡುತ್ತಿದ್ದ. ಹಣ ಖಾಲಿಯಾಗುತ್ತಿದ್ದಂತೆ ಪುನಃ ವಾಹನ ಕದಿಯುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಪಶ್ಚಿಮ ಕಾರ್ಡ್ ರಸ್ತೆ ಬಳಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಇತ್ತೀಚೆಗೆ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಶಬ್ಬೀರ್ ಸಿಕ್ಕಿಬಿದ್ದ. ಈತನಿಂದ ₹2 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬಸವೇಶ್ವರನಗರ, ಎಸ್‌.ಜೆ.ಪಾರ್ಕ್ ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು