ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಶ್ಯಾವಾಟಿಕೆ: ಕೆಪಿಐಟಿ ಕಾಯ್ದೆಯಡಿ ಮಹಿಳೆಯ ಬಂಧನ

Last Updated 23 ಜುಲೈ 2020, 7:19 IST
ಅಕ್ಷರ ಗಾತ್ರ

ಬೆಂಗಳೂರು: ಮಸಾಜ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಧ್ಯವರ್ತಿ ಮಹಿಳೆಯನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆಯಡಿ (ಕೆಪಿಐಟಿ) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

37 ವರ್ಷದ ಸ್ವಾತಿ ಬಂಧಿತ ಮಹಿಳೆ. ವಿವಿಧ ಹೆಸರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ, ಸಲೂನ್‍ಗಳನ್ನು ತೆರೆದು ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಉದ್ಯೋಗದ ನೆಪದಲ್ಲಿ ಹೊರರಾಜ್ಯದ ಯುವತಿಯರನ್ನು ಮಾನವ ಕಳ್ಳಸಾಗಣೆ ಮೂಲಕ ವೇಶ್ಯಾವಾಟಿಕೆಗೆ ದೂಡುತ್ತಿದ್ದಳು ಎನ್ನಲಾಗಿದೆ.

2007ರಿಂದ ವೇಶ್ಯಾವಾಟಿಕೆ ನಡೆಸುತ್ತಿರುವ ಈಕೆಯ ಮೇಲೆ ಕಾಟನ್‍ಪೇಟೆ, ಎಚ್‍ಎಸ್‍ಆರ್ ಬಡಾವಣೆ, ಮಾರತ್ತಹಳ್ಳಿ, ಮಹದೇವಪುರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ಪಡೆದು ವಿಚಾರಣೆಗೂ ಹಾಜರಾಗದೆ ತಲೆ ಮರೆಸಿಕೊಂಡು ದಂದೆ ಮುಂದುವರಿಸುತ್ತಿದ್ದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT