ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಬುಲೆನ್ಸ್‌ನಲ್ಲಿ ತೆರಳಿದ್ದ ಸೋಂಕಿತೆ ಸುರಕ್ಷಿತ: ಪೊಲೀಸರ ಸ್ಪಷ್ಟನೆ

Last Updated 14 ಸೆಪ್ಟೆಂಬರ್ 2020, 6:51 IST
ಅಕ್ಷರ ಗಾತ್ರ

ಬೆಂಗಳೂರು: ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ತೆರಳಿದ್ದ ಕೊರೊನಾ ಸೋಂಕಿತ ಮಹಿಳೆ ನಾಪತ್ತೆಯಾಗಿದ್ದಾಳೆ ಎಂಬ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಫ್ಯಾಕ್ಟ್ ಚೆಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮಹಿಳೆ ಹಾಗೂ ಪತಿ ನಡುವೆ ಜಗಳ ನಡೆದು, ಸ್ವಇಚ್ಛೆಯಿಂದ ಪರಿಚಿತ ವ್ಯಕ್ತಿಯೊಬ್ಬನ ಸಹಾಯದಿಂದ ಮನೆ ಬಿಟ್ಟು ತೆರಳಿರುವ ಮಾಹಿತಿ ಲಭ್ಯವಾಗಿದ್ದು, ಮಹಿಳೆ ಸುರಕ್ಷಿತವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?: ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ಮಹಿಳೆಗೆ ಕೊರೊನಾ ಪರೀಕ್ಷೆ ಬಳಿಕ ಸೋಂಕು ದೃಢಪಟ್ಟಿದೆ ಎಂದು ಸಮೀಪದ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿ, ಪಿಪಿಇ ಕಿಟ್ ಧರಿಸಿದ್ದ ಆಂಬುಲೆನ್ಸ್ ಸಿಬ್ಬಂದಿ ಆಕೆಯನ್ನು ಕರೆದೊಯ್ದಿದ್ದರು.

ಆದರೆ, ಕುಟುಂಬಸ್ಥರು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಆ ಸೋಂಕಿತ ಮಹಿಳೆ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ. ಆ ವ್ಯಾಪ್ತಿಗೆ ಆಂಬುಲೆನ್ಸ್ ಕಳಿಸಿಲ್ಲ ಎಂದು ಹೇಳಿದ್ದರು. ಈ ಸಂಬಂಧ ಬೊಮ್ಮನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ರಾಜ್ಯ ಪೊಲೀಸ್ ಫ್ಯಾಕ್ಟ್ ಚೆಕ್ ತಂಡ ತನಿಖೆ ಆರಂಭಿಸಿತ್ತು. ಈ ವೇಳೆ ಸ್ನೇಹಿತನ ಸಹಾಯದಿಂದ ಮನೆಯಿಂದ ಹೋಗಲು ಮಹಿಳೆ ಈ ರೀತಿ ಮಾಡಿದ್ದು, ಆಕೆಯ ದೂರವಾಣಿ ಕರೆ ಆಧರಿಸಿ ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಇದು ಸಾಂಸಾರಿಕ ತೊಂದರೆ. ಇದನ್ನು ಬಗೆಹರಿಸಿಕೊಳ್ಳುವುದಾಗಿ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT