ಬೆಂಗಳೂರು: ನಿವೃತ್ತ ಡಿವೈಎಸ್ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದ ಎಂ.ಸಿ.ಬಡಾವಣೆಯಲ್ಲಿ ಭಾನುವಾರ ನಡೆದಿದೆ.
ನಿವೃತ್ತ ಡಿವೈಎಸ್‌ಪಿಹನುಮಂತಪ್ಪ ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರು, ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಮಾಗಡಿ ರಸ್ತೆ, ಬ್ಯಾಟರಾಯನಪುರ ಪೊಲೀಸ್ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್ ಆಗಿ ಹಾಗೂ ಎಸಿಪಿಯಾಗಿಯೂ ಕಾರ್ಯನಿರ್ವಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.