80 ಮೊಬೈಲ್ ವಶ: ಇಬ್ಬರ ಬಂಧನ

ಬೆಂಗಳೂರು: ನಡುರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ, ಚಾಕು ತೋರಿಸಿ ಮೊಬೈಲ್ ಹಾಗೂ ನಗದು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಶೋಕ್ ಕುಮಾರ್ ಹಾಗೂ ಆಂಜನೇಯಲು ಬಂಧಿತ ಆರೋಪಿಗಳು.
ಜ.14ರಂದು ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಿಎಂಟಿಸಿ ಡಿಪೊ ಬಳಿಗೆ ಸ್ಕೂಟರ್ನಲ್ಲಿ ಬಂದಿದ್ದ ಆರೋಪಿಗಳು, ಅಲ್ಲಿ ಹೋಗುತ್ತಿದ್ದ ಸಾರ್ವಜನಿಕರಿಗೆ ಚಾಕು ತೋರಿಸಿ,ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
‘ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ನಗರದ ವಿವಿಧ ಭಾಗಗಳಲ್ಲಿ ಮೊಬೈಲ್ ಕಳ್ಳತನ ಮಾಡಿರುವುದಾಗಿ ತಿಳಿಸಿದರು. ದಸ್ತಗಿರಿ ಮಾಡಿ, ಬಂಧಿತರಿಂದ ವಿವಿಧ ಕಂಪನಿಗಳ 80 ಮೊಬೈಲ್‌ಗಳು, ₹10 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಚಾಕು, ಬೈಕ್ ಅನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ಪೊಲೀಸರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.