ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ರೌಡಿ ಅರವಿಂದ್ ಹತ್ಯೆ

Last Updated 12 ಸೆಪ್ಟೆಂಬರ್ 2021, 13:11 IST
ಅಕ್ಷರ ಗಾತ್ರ

ಬೆಂಗಳೂರು: ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಅರವಿಂದ್ (30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭಾನುವಾರ ಕೊಲೆ ಮಾಡಿದ್ದಾರೆ.

‘ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಅರವಿಂದ್ ಹೆಸರು ಭಾರತಿನಗರ ಠಾಣೆಯ ರೌಡಿಪಟ್ಟಿಯಲ್ಲಿತ್ತು. ಹಳೇ ವೈಷಮ್ಯದಿಂದಾಗಿ ಎದುರಾಳಿಗಳೇ ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಠಾಣೆ ವ್ಯಾಪ್ತಿಯ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಅರವಿಂದ್, ಸ್ನೇಹಿತರ ಜೊತೆ ಫುಟ್ಬಾಲ್ ಆಡುತ್ತಿದ್ದರು. ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಅರವಿಂದ್ ಮೇಲೆ ಹಲ್ಲೆಗೆ ಯತ್ನಿಸಿದ್ದರು' ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದ ಅರವಿಂದ್, ಸಮೀಪದಲ್ಲೇ ಇದ್ದ ಫುಟ್ಬಾಲ್ ಕ್ರೀಡಾಂಗಣದ ಒಳಗೆ ಹೋಗಿದ್ದರು. ಕೊಠಡಿಯೊಂದಕ್ಕೆ ತೆರಳಿ, ಬಾಗಿಲು ಒಳಗಿನಿಂದ ಲಾಕ್ ಮಾಡಿಕೊಂಡಿದ್ದರು. ಆತನನ್ನು ಬೆನ್ನಟ್ಟಿದ್ದ ಆರೋಪಿಗಳು, ಮೈದಾನದೊಳಗೆ ಹೋಗಿ ಕೊಠಡಿ ಬಾಗಿಲು ಲಾಕ್ ಮುರಿದಿದ್ದರು. ನಂತರ, ಕೊಠಡಿಯಲ್ಲೇ ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT