ಮಹಿಳೆ ಆತ್ಮಹತ್ಯೆ: ಪತಿ ವಿರುದ್ಧ ಪ್ರಕರಣ
ಬೆಂಗಳೂರು: ಬಾಗಲೂರು ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಮಂಜುಶ್ರೀ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಗಣೇಶ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ಹೊಸಕೋಟೆ ತಾಲ್ಲೂಕಿನ ತಾವರಕೆರೆ ಗ್ರಾಮದ ಮಂಜುಶ್ರೀ ಹಾಗೂ ಯಲಹಂಕ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ಗಣೇಶ್, ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಪತಿಯ ದೈಹಿಕ ಹಾಗೂ ಮಾನಸಿಕ ಕಿರುಕುಳದಿಂದ ಬೇಸತ್ತು ಮಂಜುಶ್ರೀ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಾಯಿ ದೂರು ನೀಡಿದ್ದಾರೆ’ ಎಂದು ಬಾಗಲೂರು ಪೊಲೀಸರು ಹೇಳಿದರು.
‘ಮದುವೆಯಾದ ನಂತರ ಹಲವು ವರ್ಷ ಇಬ್ಬರೂ ಚೆನ್ನಾಗಿದ್ದರು. ಕೆಲ ತಿಂಗಳಿನಿಂದ ಮಂಜುಶ್ರೀ ಶೀಲ ಶಂಕಿಸಿ ಪತಿ ಜಗಳ ಮಾಡಲಾರಂಭಿಸಿದ್ದ. ಹಲ್ಲೆ ಸಹ ಮಾಡಿದ್ದ. ಇದರಿಂದ ನೊಂದ ಮಂಜುಶ್ರೀ, ಮನೆಯ ಚಾವಣಿಯ ಹುಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.