ಶನಿವಾರ, ನವೆಂಬರ್ 28, 2020
20 °C
ವೃಷಭಾವತಿ ಮಾಲಿನ್ಯ: ಹೈಕೋರ್ಟ್‌ಗೆ ಮಾಹಿತಿ ಸಲ್ಲಿಕೆ

28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸದೇ ವೃಷಭಾವತಿ ನದಿಯ ಮಾಲಿನ್ಯಕ್ಕೆ ಕಾರಣವಾಗಿದ್ದ 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್‌ಪಿಸಿಬಿ) ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿದೆ.

ವೃಷಭಾವತಿ ಪುನಶ್ಚೇತನ ಯೋಜನೆ ಮತ್ತು ನದಿಯ ಹರಿವು ತಿರುಗಿಸುವ ಪ್ರಸ್ತಾವ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೆಎಸ್‌ಪಿಸಿಬಿ ವಕೀಲರು ಶುಕ್ರವಾರ ಈ ಮಾಹಿತಿ ಒದಗಿಸಿದರು.

ನದಿಗೆ ತ್ಯಾಜ್ಯ ಹರಿಸುತ್ತಿದ್ದ 59 ಕೈಗಾರಿಕೆಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ. 22 ಕೈಗಾರಿಕೆಗಳಿಗೆ ಬೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದೆ. 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಕೈಗಾರಿಕೆಗಳನ್ನು ಮುಚ್ಚುವಂತೆ ನೀಡಿರುವ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.

ವೃಷಭಾವತಿ ಪುನಶ್ಚೇತನ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಡಿಕೊಂಡಿರುವ ಒಪ್ಪಂದವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿದ ವಿಭಾಗೀಯ ಪೀಠ, ಡಿಸೆಂಬರ್‌ 3ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.