ಹೊಸ ವರ್ಷಾಚರಣೆ ದಿನ ಕುಡಿದು ವಾಹನ ಓಡಿಸಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಡಿ. 31ರ ರಾತ್ರಿ ಯಾರಾದರೂ ಮದ್ಯ ಕುಡಿದು ವಾಹನ ಚಲಾಯಿಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿರುವ ನಗರ ಸಂಚಾರ ವಿಭಾಗದ ಜಂಟಿ ಕಮಿಷನರ್ ರವಿಕಾಂತೇಗೌಡ, 'ಅಂದು ಕುಡಿದು ವಾಹನ ಚಲಾಯಿಸಬೇಡಿ.ಚಲಾಯಿಸಿ ಸಿಕ್ಕಿಬಿದ್ದರೆ ನಿರ್ಲಕ್ಷ್ಯ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು' ಎಂದರು.
'ಹೊಸ ವರ್ಷಾಚರಣೆಗೆ ಈ ಬಾರಿ 175 ಸ್ಥಳಗಳಲ್ಲಿ ಮದ್ಯ ತಪಾಸಣೆ ನಡೆಸಲಾಗುವುದು' ಎಂದರು. ಅಂದು ಬಾರ್ ಆ್ಯಂಡ್ ರೆಸ್ಟೊರೆಂಟ್ಗಳು 2 ಗಂಟೆವರೆಗೆ ತೆರೆದಿರಲಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.