ಶನಿವಾರ, ಫೆಬ್ರವರಿ 29, 2020
19 °C

ಶೂಟ್​ ಮಾಡುವುದಾಗಿ ಬೆದರಿಸಿ ಕಾರು, ಹಣ  ದೋಚಿದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದುಷ್ಕರ್ಮಿಗಳು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಶೂಟ್​ ಮಾಡುವುದಾಗಿ ಬೆದರಿಸಿ ಹಣದ ದೋಚಿರುವ ಘಟನೆ ನೆಲಗೆದರನಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ. 

ಅಮೆಜಾನ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್​ ಎಂಬವರು ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಇಟಿಯೋಸ್​ ಕಾರ್​ನಲ್ಲಿ ಬಂದ ದುಷ್ಕರ್ಮಿಗಳು ಗಿರೀಶ್​​  ಅವರ ಕಾರನ್ನು ಅಡ್ಡಗಟ್ಟಿದ್ದಾರೆ.  ಬಳಿಕ ಗಿರೀಶ್ ಅವರನ್ನು ಕಾರಿನಿಂದ ಕೆಳಗಿಳಿಸಿ ಹಣೆಗೆ ಗನ್​ ಇಟ್ಟು ಶೂಟ್​ ಮಾಡುವುದಾಗಿ ಬೆದರಿಸಿದ್ದಾರೆ. ಜತೆಗೆ ಹಲ್ಲೆ ಕೂಡ ನಡೆಸಿದ್ದಾರೆ. ಅವರ ಬಳಿ ಇದ್ದ ಕಾರು, ಹಣ, ಮೊಬೈಲ್​ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾರೆ.

ಸ್ಥಳೀಯರ ಸಹಾಯದಿಂದ ಗಿರೀಶ್ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೀಣ್ಯ ಮತ್ತು ರಾಜಗೋಪಾಲನಗರ ಪೊಲೀಸರು ಆರೋಪಿಗಳನ್ನು ಹಿಂಬಾಲಿಸಿದ್ದಾರೆ. ಕಾರನ್ನು ಹೆಸರಘಟ್ಡ ಬಳಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ, ಕಾನ್‌ಸ್ಟೆಬಲ್ ಶ್ರೀನಿವಾಸ್ ಮತ್ತು ಶಂಭುಲಿಂಗಮೂರ್ತಿ ಅವರಿಗೆ ಸಣ್ಞಪುಟ್ಟ ಗಾಯವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು