ಸೋಮವಾರ, ಫೆಬ್ರವರಿ 24, 2020
19 °C

‘ಪೌರತ್ವ ಮಸೂದೆ: ಧರ್ಮದ ಆಧಾರದಲ್ಲಿ ದೇಶ ವಿಭಜನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪೌರತ್ವ ತಿದ್ದುಪಡಿ ಮಸೂದೆಯು ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸಲು ಹೊಡೆಯುತ್ತಿರುವ ಅಂತಿಮ ಮೊಳೆ’ ಎಂದು ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್‌ ಆತಂಕ ವ್ಯಕ್ತಪಡಿಸಿದರು.

ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (ಎಐಡಿವೈಒ) ನಗರದಲ್ಲಿ ಗುರುವಾರ ಆಯೋಜಿಸಿದ್ದ ‘2019ರ ಆರ್ಥಿಕ ಬಿಕ್ಕಟ್ಟು- ಯುವಜನ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಧರ್ಮದ ಆಧಾರದಲ್ಲಿ ರೂಪಿಸಿರುವ ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ದೇಶದ ಭದ್ರತೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಛಿದ್ರ ಮಾಡಲಿದೆ. ಮುಸ್ಲಿಮರು ಮಾತ್ರ ಇದರಿಂದ ಅನ್ಯಾಯಕ್ಕೆ ಒಳಗಾಗಲಿದ್ದಾರೆ ಎಂದು ಭಾವಿಸಿಕೊಂಡು ಬೇರೆಯವರು ಸುಮ್ಮನಿದ್ದರೆ ಮುಂದೆ ಎಲ್ಲರೂ ತೊಂದರೆಗೆ ಸಿಲುಕುವುದು ಗ್ಯಾರಂಟಿ. ಹೀಗಾಗಿ, ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದರು.

‘ಕೈಗಾರಿಕೆಗಳು ಮತ್ತು ಶಾಲೆಗಳ ಬದಲಿಗೆ ಬೀದಿಗೊಂದು ಪೂಜಾ ಮಂದಿರಗಳು ನಿರ್ಮಾಣವಾಗುತ್ತಿವೆ. ನಿರುದ್ಯೋಗದ ವಿರುದ್ಧ ಚಳವಳಿ ಬಲಿಷ್ಠವಾಗಿ ನಡೆಯಬೇಕಿದ್ದು, ಜೈಲಿಗೆ ಹೋಗಲು ಯುವಜನರು ಸಜ್ಜಾಗಬೇಕು’ ಎಂದು ತಿಳಿಸಿದರು.

‘ಹೈದರಾಬಾದ್‌ನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದು ಅಪಾಯಕಾರಿ ಬೆಳವಣಿಗೆ. ಪೊಲೀಸರೇ ಶಿಕ್ಷೆ ಕೊಡುವುದಾದರೆ ನ್ಯಾಯಾಂಗದ ಕೆಲಸ ಏನು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು