ಶುಕ್ರವಾರ, ಮೇ 27, 2022
30 °C

ಕ್ರಿಪ್ಟೊ ಕರೆನ್ಸಿ ಹೂಡಿಕೆ: ₹ 57.56 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ರಿಪ್ಟೊ ಕರೆನ್ಸಿ ಮೇಲೆ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ₹ 57.56 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಜಯನಗರ 4ನೇ ಹಂತದ ನಿವಾಸಿಯಾದ 46 ವರ್ಷದ ಮಹಿಳೆಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕ್ರಿಪ್ಟೊ ಕರೆನ್ಸಿ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಮಹಿಳೆ, ಗೂಗಲ್‌ನಲ್ಲಿ ಮಾಹಿತಿ ಹುಡುಕಾಡಿದ್ದರು. ಲೆಕ್ಸಾಟ್ರೇಡ್ ಜಾಲತಾಣದ ಬಗ್ಗೆ ತಿಳಿದುಕೊಂಡಿದ್ದರು. ಆ ಜಾಲತಾಣದಲ್ಲಿ ಖಾತೆ ತೆರೆದಿದ್ದ ಮಹಿಳೆ, ತಮ್ಮ ವೈಯಕ್ತಿಕ ವಿವರಗಳನ್ನು ದಾಖಲಿಸಿದ್ದರು.’

‘ಸ್ಕೈಪ್ ಆ್ಯಪ್‌ ಮೂಲಕ ಮಹಿಳೆಗೆ ಕರೆ ಮಾಡಿದ್ದ ಆರೋಪಿ, ಕ್ರಿಪ್ಟೊ ಕರೆನ್ಸಿ ವ್ಯವಹಾರದ ಏಜೆಂಟ್‌ನೆಂದು ಪರಿಚಯಿಸಿಕೊಂಡಿದ್ದ. ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ದುಪ್ಪಟ್ಟು ಲಾಭ ಬರುವುದಾಗಿ ಹೇಳಿದ್ದ. ಅದನ್ನು ನಂಬಿದ್ದ ಮಹಿಳೆ, ಹಂತ ಹಂತವಾಗಿ ₹ 57.56 ಲಕ್ಷ ಹೂಡಿಕೆ ಮಾಡಿದ್ದರು. ಕೆಲ ದಿನಗಳ ನಂತರ ಆರೋಪಿ ಯಾವುದೇ ಹಣ ವಾಪಸು ನೀಡಿಲ್ಲ. ಸಂಪರ್ಕಕ್ಕೂ ಸಿಕ್ಕಿಲ್ಲ’ ಎಂದೂ ‍ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು