ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಪ್ಟೊ ಕರೆನ್ಸಿ ಪ್ರಕರಣ: ಮಾಹಿತಿ ಕೋರಿದ ಎಸ್‌ಐಟಿ

Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಟ್‌ ಕಾಯಿನ್ (ಬಿಟಿಸಿ) ಅಕ್ರಮದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಕರಣ ಸಂಬಂಧ ಸಾರ್ವಜನಿಕರಿಂದ ಮತ್ತಷ್ಟು ದಾಖಲೆ ಸಂಗ್ರಹಿಸಲು ಮುಂದಾಗಿದ್ದಾರೆ.

ದಾಖಲೆ ಹಾಗೂ ಮಾಹಿತಿಗಳಿದ್ದರೆ ಎಸ್‌ಐಟಿ ಅಧಿಕಾರಿಗಳಿಗೆ ತಿಳಿಸಬಹುದು. ಅವರ ಹೆಸರನ್ನು ಯಾರಿಗೂ ತಿಳಿಸುವುದಿಲ್ಲ. ಕಳೆದ ಆಗಸ್ಟ್‌ನಿಂದ ಎಸ್‌ಐಟಿ ಈ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕ್ರಿಪ್ಟೊ ಕರೆನ್ಸಿಯ ವ್ಯವಹಾರದ ಮಾಹಿತಿ, ಪುರಾವೆಗಳಿದ್ದರೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ನೀಡಬಹುದು. ಇ–ಮೇಲ್‌: sitcid2023@ksp.gov.in ಅಥವಾ 94808 00151 ವಾಟ್ಸ್‌ಆ್ಯಪ್‌ ಮಾಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.

ಕೆಂಪೇಗೌಡ ನಗರ ಠಾಣೆಯಲ್ಲಿ 2020–21ರಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಇತ್ತೀಚೆಗೆ ಪ್ರಮುಖ ಆರೋಪಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಎಸ್‌ಐಟಿ ತಂಡವು ಡಿಜಿಟಲ್‌ ದಾಖಲೆ ಹಾಗೂ ನಗದು ಜಪ್ತಿ ಮಾಡಿಕೊಂಡಿತ್ತು. ಅಂತರರಾಷ್ಟ್ರೀಯ ಹ್ಯಾಕರ್ ಸೇರಿದಂತೆ ಸ್ಥಳೀಯ ಆರೋಪಿಗಳು, ಏಜೆನ್ಸಿಗಳ ಸರ್ವರ್ ಹ್ಯಾಕ್ ಮಾಡಿ ಬಿಟ್ ಕಾಯಿನ್‌ಗಳನ್ನು ಸಂಪಾದಿಸಿದ್ದರು. ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT